ಐಟಿಐ ಪಾಸಾದವರಿಗೆ ಆಕ್ಸಿಜನ್ ಘಟಕ ನಿರ್ವಹಣೆ, ಕಾರ್ಯಾಚರಣೆ ತರಬೇತಿ: ಡಿಸಿಎಂ ಅಶ್ವತ್ಥ ನಾರಾಯಣ

ಬೆಂಗಳೂರು : ಐಟಿಐ ವಿದ್ಯಾರ್ಥಿಗಳಿಗೆ ರಾಜ್ಯ ಸರ್ಕಾರ ಭರ್ಜರಿ ಸಿಹಿಸುದ್ದಿಯೊಂದನ್ನು ನೀಡಿದ್ದು, ಜಿಲ್ಲಾ, ತಾಲೂಕು ಆಸ್ಪತ್ರೆಗಳು ಸೇರಿದಂತೆ ಸಮುದಾಯ ಮತ್ತು ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲೂ ಆಮ್ಲಜನಕ ಉತ್ಪಾದಕ ಘಟಕಗಳನ್ನು ಸ್ಥಾಪಿಸಲಾಗುತ್ತಿದ್ದು, ಅವುಗಳ ನಿರ್ವಹಣೆ ಹಾಗೂ ಕಾರ್ಯಾಚರಣೆಎ ಐಟಿಐ ವಿದ್ಯಾರ್ಥಿಗಳನ್ನೇ ನೇಮಕ ಮಾಡಲಾಗುವುದು ಎಂದು ಡಿಸಿಎಂ ಅಶ್ವತ್ಥ್ ನಾರಾಯಣ ಹೇಳಿದ್ದಾರೆ.
ವಿಕಾಸಸೌಧದಲ್ಲಿ ಇಂದು ಪ್ರಸಕ್ತ ಶೈಕ್ಷಣಿಕ ವರ್ಷದಲ್ಲಿ ಐಟಿಐನಲ್ಲಿ ಉತ್ತೀರ್ಣರಾದ ವಿದ್ಯಾರ್ಥಿಗಳಿಗೆ ಆಕ್ಸಿಜನ್ ಘಟಕಗಳ ನಿರ್ವಹಣೆ-ಕಾರ್ಯಾಚರಣೆ ಕುರಿತ ಆನ್ಲೈನ್ ತರಬೇತಿಗೆ ವರ್ಚುಯಲ್ ಕಾರ್ಯಕ್ರಮದ ಮೂಲಕ ಚಾಲನೆ ನೀಡಿ ಮಾತನಾಡಿದ ಅವರು,ರಾಜ್ಯದ ಪ್ರತಿಯೊಂದು ಆಸ್ಪತ್ರೆಯಲ್ಲಿ ಆಕ್ಸಿಜನ್ ಘಟಕಗಳನ್ನು ಸ್ಥಾಪನೆ ಮಾಡಲು ನಿರ್ಧರಿಸಲಾಗಿದೆ. ಇದುವರೆಗೆ 350 ಘಟಕಗಳನ್ನು ಸ್ಥಾಪನೆ ಮಾಡಲು ನಿರ್ಧರಿಸಲಾಗಿದ್ದು, ಇದುವರೆಗೆ 350 ಘಟಕಗಳನ್ನು ಅಳವಡಿಸಲಾಗಿದೆ. ಇವುಗಳ ನಿರ್ವಹಣೆಯನ್ನು ಐಟಿ ವಿದ್ಯಾರ್ಥಿಗಳಿಗೆ ವಹಿಸಲಾಗುವುದು ಎಂದರು.
ಐಟಿಐ ವಿದ್ಯಾರ್ಥಿಗಳು ಇನ್ಮುಂದೆ ಆಕ್ಸಿಜನ್ ಘಟಕಗಳನ್ನು ನಿರ್ವಹಿಸುವುದು ಮತ್ತು ಆಕ್ಸಿಜನ್ ತಯಾರಿಕಾ ಯಂತ್ರಗಳನ್ನು ತಯಾರಿಸುವ ಕುಶಲತೆಯನ್ನು ಬೆಳಸಿಕೊಳ್ಳಬೇಕು ಎಂದು ಸಲಹೆ ನೀಡಿದ್ದಾರೆ.

Share

Leave a Reply

Your email address will not be published. Required fields are marked *