ವಾಶಿಂಗ್ಟನ್ : ವಿಶ್ವಾದ್ಯಂತ ಕೊರೋನಾ ವೈರಸ್ ಮತ್ತೆ ಏರಿಕೆಯಾಗುತ್ತಿದ್ದು, ಇದೀಗ ಅಮೆರಿಕಾದಲ್ಲಿ ಕೊವಿಡ್-19 ಸೋಂಕಿನಿಂದಲೇ ಸಾವನ್ನಪ್ಪಿರುವವರ ಸಂಖ್ಯೆ 5 ಲಕ್ಷದ ಗಡಿ ದಾಟಿದೆ. ಜಗತ್ತಿನಲ್ಲಿ ಅತಿಹೆಚ್ಚು ಕೊರೊನಾವೈರಸ್ ಸೋಂಕಿತ ಪ್ರಕರಣಗಳು ಅಮೆರಿಕಾದಲ್ಲೇ ಪತ್ತೆಯಾಗಿವೆ. ಅಮೆರಿಕಾದಲ್ಲೇ ಅತಿಹೆಚ್ಚು ಜನರು ಮಹಾಮಾರಿ ಕೊವಿಡ್-19 ಸೋಂಕಿನಿಂದ ಸಾವನ್ನಪ್ಪಿದ್ದಾರೆ. ಕಳೆದ 24 ಗಂಟೆಗಳಲ್ಲಿ ಅತಿಹೆಚ್ಚು ಸೋಂಕಿತ ಪ್ರಕರಣಗಳು ಅಮೆರಿಕಾದಲ್ಲಿ ಪತ್ತೆಯಾಗಿವೆ.
ಯುನೈಟೆಡ್ ಸ್ಟೇಟ್ಸ್ ಆಫ್ ಅಮೆರಿಕಾದಲ್ಲಿ ಒಂದೇ ದಿನ 1270 ಮಂದಿ ಕೊರೊನಾವೈರಸ್ ನಿಂದ ಸಾವನ್ನಪ್ಪಿದ್ದು, ಸಾವಿನ ಸಂಖ್ಯೆ 5,12,487ಕ್ಕೆ ಏರಿಕೆಯಾಗಿದೆ. ಕಳೆದ 24 ಗಂಟೆಗಳಲ್ಲಿ ದೇಶದಲ್ಲಿ 55,945 ಹೊಸ ಪ್ರಕರಣಗಳು ಪತ್ತೆಯಾಗಿದ್ದು, ಒಟ್ಟು ಸೋಂಕಿತ ಪ್ರಕರಣಗಳ ಸಂಖ್ಯೆ 2,88,22,995ಕ್ಕೆ ಏರಿಕೆಯಾಗಿದೆ. ಒಟ್ಟು ಪ್ರಕರಣಗಳ ಪೈಕಿ 1,91,11,359 ಸೋಂಕಿತರು ಗುಣಮುಖರಾಗಿದ್ದು, 91,99,149 ಸಕ್ರಿಯ ಪ್ರಕರಣಗಳಿವೆ ಎಂದು ತಿಳಿದು ಬಂದಿದೆ.
ಕಳೆದ 24 ಗಂಟೆಗಳಲ್ಲಿ ವಿಶ್ವದಲ್ಲಿ ಬರೋಬ್ಬರಿ 2,80,899 ಮಂದಿಗೆ ಕೊರೊನಾವೈರಸ್ ಸೋಂಕು ತಗುಲಿರುವುದು ವೈದ್ಯಕೀಯ ತಪಾಸಣೆಯಲ್ಲಿ ದೃಢಪಟ್ಟಿದೆ. ಜಗತ್ತಿನಾದ್ಯಂತ ಒಟ್ಟು ಸೋಂಕಿತ ಪ್ರಕರಣಗಳ ಸಂಖ್ಯೆ 11,22,50,158ಕ್ಕೆ ಏರಿಕೆಯಾಗಿದೆ. 6406 ಸಾವನ್ನಪ್ಪಿದ್ದು, ಸಾವಿನ ಸಂಖ್ಯೆ 24,84,711ಕ್ಕೆ ಏರಿಕೆಯಾಗಿದೆ.