ರೌಡಿಶೀಟರ್ ಬಬ್ಲಿ ಕೊಲೆ ಪ್ರಕರಣ: ಹಂತಕರ ಬಂಧನಕ್ಕಾಗಿ ಪೊಲೀಸರಿಂದ ಮೂರು ವಿಶೇಷ ತಂಡಗಳ ರಚನೆ

ಬೆಂಗಳೂರು : ಹಾಡು ಹಗಲೇ ಬ್ಯಾಂಕ್ಗೆ ನುಗ್ಗಿ ರೌಡಿ ಬಬ್ಲಿ ಎಂಬಾತನನ್ನು ಭೀಕರವಾಗಿ ಕೊಲೆ ಮಾಡಿ ಪರಾರಿಯಾಗಿರುವ ದುಷ್ಕರ್ಮಿಗಳ ಬಂಧನಕ್ಕಾಗಿ ಮೂರು ವಿಶೇಷ ತಂಡಗಳನ್ನು ರಚಿಸಲಾಗಿದೆ. ಈ ತಂಡಗಳು ಈಗಾಗಲೇ ಕಾರ್ಯಾಚರಣೆ ಕೈಗೊಂಡಿದ್ದು , ಎರಡು ತಂಡಗಳು ಹೊರ ರಾಜ್ಯಗಳಿಗೆ ತೆರಳಿವೆ. ನಗರದಲ್ಲಿರುವ ಒಂದು ತಂಡ ಕೆಲವು ಶಂಕಿತ ವ್ಯಕ್ತಿಗಳನ್ನು ಕರೆ ತಂದು ವಿಚಾರಣೆಗೆ ಒಳಪಡಿಸಿ ಕೊಲೆಗೆ ಸಂಬಂಧಿಸಿದಂತೆ ಮಾಹಿತಿಗಳನ್ನು ಸಂಗ್ರಹಿಸುತ್ತಿದೆ.

ಹಳೆಯ ದ್ವೇಷದ ಹಿನ್ನೆಲೆಯಲ್ಲಿ ರೌಡಿ ಜೋಸೆಫ್ ಅಲಿಯಾಸ್ ಬಬ್ಲಿ ಕೊಲೆಯಾಗಿದೆ ಎಂದು ಶಂಕಿಸಿರುವ ಆಗ್ನೇಯ ವಿಭಾಗದ ಪೊಲೀಸರು ಆ ನಿಟ್ಟಿನಲ್ಲಿ ತನಿಖೆ ಕೈಗೊಂಡಿದ್ದಾರೆ.ಆರೋಪಿಗಳು ಬಹಳ ದಿನಗಳಿಂದ ಸಂಚು ರೂಪಿಸಿ ಹೊಂಚು ಹಾಕಿ ಕೊಲೆ ಮಾಡಿದ್ದಾರೆ. ತಮ್ಮ ಗುರುತುಗಳು ಸಿಗದಂತೆ ಮುಖಕ್ಕೆ ಬಟ್ಟೆ ಸುತ್ತಿಕೊಂಡು ಬಂದಿರುವುದನ್ನು ನೋಡಿದರೆ ಆರೋಪಿಗಳು ಸ್ಥಳೀಯರಿರಬಹುದೆಂಬ ಶಂಕೆ ವ್ಯಕ್ತವಾಗಿದೆ..

Share

Leave a Reply

Your email address will not be published. Required fields are marked *