ಟ್ರಾಕ್ಟರ್ ಮತ್ತು ಬೈಕ್ ನಡುವೆ ಅಪಘಾತ; ಸೆಸ್ಕ್ ನೌಕರ ವಿಧಿವಶ

ಮಂಡ್ಯ :- ಟ್ರ್ಯಾಕ್ಟರ್ ಮತ್ತು ದ್ವಿಚಕ್ರ ವಾಹನದ ನಡುವೆ ಡಿಕ್ಕಿ ಸಂಭವಿಸಿ ಬೈಕ್ ಸವಾರನಾಗಿದ್ದ ಸೆಸ್ಕ್ ನೌಕರರೊಬ್ಬರು ಮೃತಪಟ್ಟಿರುವ ಘಟನೆ ಮದ್ದೂರು ಪಟ್ಟಣ ಸಮೀಪದ ಗೊರವನಹಳ್ಳಿ ಬಳಿ ಮಂಗಳವಾರ ನಡೆದಿದೆ. ಟಿ.ನರಸಿಪುರ ತಾಲೂಕಿನ ಸೋಸಲೆ ಗ್ರಾಮದ ಗಣೇಶ್ ಮೂರ್ತಿ (34) ಮೃತ ವ್ಯಕ್ತಿ ಎಂದು ತಿಳಿದು ಬಂದಿದೆ. ಮದ್ದೂರು  ಪಟ್ಟಣದ ಸೆಸ್ಕ್ ಕಚೇರಿಯಲ್ಲಿ ಉಗ್ರಾಣದ ಕಾವಲುಗಾರನಾಗಿ ಕರ್ತವ್ಯ ನಿರ್ವಹಿಸುತ್ತಿದ್ದು,

ಕಾರ್ಯನಿಮಿತ್ತ ಕೆ.ಎಂ.ದೊಡ್ಡಿಗೆ ಹೋಗಿ ನಂತರ ಮದ್ದೂರು ಕಡೆಗೆ ಬೈಕ್ನಲ್ಲಿ ಬರುವ ವೇಳೆ ಟ್ರ್ಯಾಕ್ಟರ್ ಚಾಲಕನ ಅಜಾಗರುಕತೆ ಚಾಲನೆಯಿಂದ ಸೆಸ್ಕ್ ನೌಕರನ ಬೈಕ್ ಡಿಕ್ಕಿ ಹೊಡೆದು ಟ್ರಾಕ್ಟರ್ ಚಕ್ರಕ್ಕೆ ಸಿಲುಕಿದ್ದಾರೆ. ತೀವ್ರ ರಕ್ತಸ್ರಾವದಿಂದ ಬಳಲುತ್ತಿದ್ದ ಇವರನ್ನು ತಕ್ಷಣವೇ ಸ್ಥಳೀಯರು ಪಟ್ಟಣದ ಗುರುಶಾಂತಪ್ಪ ಸರ್ಕಾರಿ ಆಸ್ಪತ್ರೆಗೆ ಚಿಕಿತ್ಸೆಗೆ ಸಾಗಿಸುವಷ್ಟರಲ್ಲಿ ಮೃತಪಟ್ಟಿದ್ದಾರೆ ಎನ್ನಲಾಗಿದೆ. ಈ ಸಂಬಂಧ ಮದ್ದೂರು ಪಟ್ಟಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

 

Share

Leave a Reply

Your email address will not be published. Required fields are marked *