ಉದ್ಯಮಿ ಗುಂಡಿಕ್ಕಿ ಕೊಂದ ದುಷ್ಕರ್ಮಿಗಳು :ಹೊತ್ತಿ ಉರಿದ ಕೂಚ್​ ಬೆಹಾರ್​!

ಪಶ್ಚಿಮ ಬಂಗಾಳ: ಉದ್ಯಮಿಯೊಬ್ಬನನ್ನು ಗುಂಡಿಕ್ಕಿ ಕೊಂದಿರುವ ಘಟನೆ ನಡೆದಿದ್ದು, ಹೀಗಾಗಿ ಪಶ್ಚಿಮ ಬಂಗಾಳದ ಕೂಚ್​ ಬೆಹಾರ್​​ನಲ್ಲಿ ಉದ್ವಿಗ್ನ ಪರಿಸ್ಥಿತಿ ನಿರ್ಮಾಣಗೊಂಡಿದೆ. ಗುಂಡು ಹಾರಿಸಿ ಉದ್ಯಮಿ ಕೊಲೆ ಮಾಡಲಾಗಿದ್ದು, ಇದಾದ ಗಂಟೆ ಕಳೆದ್ರೂ ಸ್ಥಳಕ್ಕೆ ಪೊಲೀಸರು ಆಗಮಿಸಿದ ಕಾರಣ ಸ್ಥಳದಲ್ಲಿ ಆಕ್ರೋಶ ಭುಗಿಲೆದ್ದಿದ್ದು, ಸ್ಥಳೀಯರು ಆಕ್ರೋಶ ಹೊರಹಾಕಿದ್ದರು.

ರೋಡ್​ನಲ್ಲಿ ಟೈರ್​ ಸುಟ್ಟು ಹಾಕಿ ತಮ್ಮ ಆಕ್ರೋಶ ಹೊರಹಾಕಿದ್ದು, ಪೊಲೀಸರ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ. ಇನ್ನು ಖಾಕಿ ಪಡೆ ಮೇಲೆ ಕಲ್ಲು ಎಸೆಯಲಾಗಿದೆ ಎಂಬ ಆರೋಪ ಕೇಳಿ ಬಂದಿದೆ.

ಸದ್ಯ ಪರಿಸ್ಥಿತಿಯನ್ನ ನಿಯಂತ್ರಣಕ್ಕೆ ತರಲು ಪೊಲೀಸರು ಲಾಠಿ ಚಾರ್ಜ್​ ಹಾಗೂ ಅಶ್ರುವಾಯು ಪ್ರಯೋಗ ನಡೆಸಿದರು. ಉದ್ಯಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಪೊಲೀಸರು ಪ್ರಕರಣ ದಾಖಲು ಮಾಡಿಕೊಂಡಿದ್ದು, ಆರೋಪಿಗಳಿಗಾಗಿ ಶೋಧ ಕಾರ್ಯ ನಡೆಸುತ್ತಿರುವುದಾಗಿ ತಿಳಿಸಿದ್ದಾರೆ.

Share

Leave a Reply

Your email address will not be published. Required fields are marked *