CM ಬದಲಾವಣೆ ವಿಚಾರ ; ಬೇಗ ವಾತಾವರಣ ತಿಳಿಗೊಳಿಸಿ ಬಿಜೆಪಿ ಹೈಕಮಾಂಡ್ ಗೆ HDK ಸಲಹೆ

ಮಂಡ್ಯ :- ಮುಖ್ಯಮಂತ್ರಿ ಯಡಿಯೂರಪ್ಪ ಜು.26 ರಂದು ರಾಜೀನಾಮೆ ನೀಡುತ್ತಾರೆ ಎಂಬ ಸುಳಿವು ವಿಚಾರಕ್ಕೆ ಸಂಬಂಧಿಸಿದಂತೆ ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಮಂಡ್ಯ ಜಿಲ್ಲೆಯ ಮಳವಳ್ಳಿಯಲ್ಲಿ ಪ್ರತಿಕ್ರಿಯೆ ನೀಡಿದ್ದಾರೆ.

ಇದು ಬಿಜೆಪಿಯ ಆಂತರಿಕ ವಿಚಾರ ನನಗೆ ಸಂಬಂಧಿಸಿದ ವಿಷಯವಲ್ಲ, ಬಿಜೆಪಿ ಪಕ್ಷದ ನಿರ್ಧಾರದಲ್ಲಿ ಮೂಗು ತೂರಿಸುವುದು ಶೋಭೆ ತರಲ್ಲ. ಮುಖ್ಯಮಂತ್ರಿ ಬದಲಾವಣೆ ವಿಚಾರವೇನು ಹೊಸದಲ್ಲ ಕಳೆದ 2 ವರ್ಷಗಳಿಂದಲೂ ನಡೆಯುತ್ತಿದೆ ಎಂದರು.

ಈಗಾಗಲೇ ರಾಜ್ಯದಲ್ಲಿ ಕೊರೋನಾ ಸೇರಿದಂತೆ ಜನರು ಹಲವಾರು ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ. ಇಂತಹ ವಿಷಯಗಳಿಗೆ ನಿಮ್ಮ ಸಮಯ ವ್ಯರ್ಥ ಮಾಡಬೇಡಿ. ಬೇಗ ಈ ವಾತಾವರಣ ತಿಳಿಗೊಳಿಸಿ ಉತ್ತಮ ಆಡಳಿತ ನೀಡುವಂತಾಗಲಿ ಎಂದು ಬಿಜೆಪಿ ಹೈಕಮಾಂಡ್‌ಗೆ ಹೆಚ್.ಡಿ ಕುಮಾರಸ್ವಾಮಿ ಸಲಹೆ ನೀಡಿದ್ದಾರೆ.

ಇನ್ನು ಯಡಿಯೂರಪ್ಪ ಅವರನ್ನು ಮುಖ್ಯಮಂತ್ರಿ ಸ್ಥಾನದಿಂದ ಇಳಿಯದಂತೆ ಮಠಾಧೀಶರ ಬೆಂಬಲ ವಿಚಾರಕ್ಕೆ ನಾನು ಮಹತ್ವ ಕೊಡುವುದಿಲ್ಲ. ಒಬ್ಬೊಬ್ಬರ ಮಠಾಧೀಶರಲ್ಲಿ ಒಂದೊಂದು ಭಾವನೆ ಇದೆ, ಹಾಗೂ ಅವರ ಭಾವನೆಗಳನ್ನು ವ್ಯಕ್ತಪಡಿಸಿದ್ದಾರೆ.
ಮಠಾಧೀಶರ ಭಾವನೆ ಸರಿಯೋ ತಪ್ಪೋ ಎಂಬ ನಿರ್ಧಾರ ರಾಜ್ಯದ ಜನರದ್ದು ಎಂದು ತಿಳಿಸಿದರು.

ವರದಿ : ಗಿರೀಶ್ ರಾಜ್ ಮಂಡ್ಯ.

Share

Leave a Reply

Your email address will not be published. Required fields are marked *