CM ಆಗಿ BSY ಮುಂದುವರೆಯಲಿ ; ಬೂಕನಕೆರೆ ಗ್ರಾಮ ದೇವತೆ ಗೋಗಾಲಮ್ಮನ ಮೊರೆಹೋದ ಬೆಂಬಲಿಗರು.

ಮಂಡ್ಯ :- ಮುಖ್ಯಮಂತ್ರಿಯಾಗಿ ಯಡಿಯೂರಪ್ಪ ರವರನ್ನು ಮುಂದುವರೆಯಬೇಕೆಂದು ಬಿಎಸ್ವೈ ಹುಟ್ಟೂರಾದ ಬೂಕನಕೆರೆಯಲ್ಲಿ ಗ್ರಾಮದೇವತೆಗೆ ಗ್ರಾಮಸ್ಥರು ವಿಶೇಷ ಪೂಜೆ ಸಲ್ಲಿಸಿದ್ದಾರೆ.

ಮಂಡ್ಯ ಜಿಲ್ಲೆಯ ಕೆ.ಆರ್.ಪೇಟೆ ತಾಲ್ಲೂಕಿನ ಬೂಕನಕೆರೆ ಗ್ರಾಮದ ಶ್ರೀ ಆದಿಶಕ್ತಿ ಗೋಗಾಲಮ್ಮ ದೇವಿಗೆ ಗ್ರಾಮದ ಮುಖಂಡರು ಹಾಗೂ ಬಿಜೆಪಿ ಕಾರ್ಯಕರ್ತರು ವಿಶೇಷ ಪೂಜೆ ಸಲ್ಲಿಸಿ ಮುಖ್ಯಮಂತ್ರಿಯಾಗಿ ಯಡಿಯೂರಪ್ಪ ಮುಂದುವರೆಯುವಂತೆ ಪ್ರಾರ್ಥನೆ ಮಾಡಿದ್ದಾರೆ.

ರಾಜ್ಯದಲ್ಲಿ ಬಿಜೆಪಿ ಪಕ್ಷವನ್ನು ಕಷ್ಟ ಪಟ್ಟು ಅಧಿಕಾರಕ್ಕೆ ತಂದು ಯಡಿಯೂರಪ್ಪ ಕೇವಲ 2 ವರ್ಷಗಳಲ್ಲಿ ರಾಜ್ಯದ ಜನತೆಗೆ ಹಲವು ಜನಪರ ಯೋಜನೆಗಳನ್ನು ನೀಡಿ ಉತ್ತಮ ಆಡಳಿತ ನಡೆಸಿದ್ದಾರೆ. ಆಗಾಗಿ ಇನ್ನುಳಿದ ಅವಧಿಗೂ ಯಡಿಯೂರಪ್ಪ ಅವರನ್ನೇ ಮುಖ್ಯಮಂತ್ರಿಯನ್ನಾಗಿ ಕೇಂದ್ರ ನಾಯಕರು ಮುಂದುವರೆಸಬೇಕೆಂದು ಬಿಎಸ್ವೈ ಸಹಪಾಠಿ ರಾಮಣ್ಣ ಹಾಗೂ ಗ್ರಾಮಸ್ಥರು ಒತ್ತಾಯಿಸಿದ್ದಾರೆ.

ವರದಿ : ಗಿರೀಶ್ ರಾಜ್ ಮಂಡ್ಯ.

Share

Leave a Reply

Your email address will not be published. Required fields are marked *